ಮಕ್ಕಳ ಸಾಹಿತ್ಯ ಪರಿಷತ್ತು ಹೊಸಪೇಟೆ ತಾಲೂಕು ಘಟಕ ಉದ್ಘಾಟನೆ ನೂತನ ಪದಾಧಿಕಾರಿಗಳ ಪದಗ್ರಹಣ.
ದಿನಾಂಕ:19.02.2023 ರಂದು ಹೊಸಪೇಟೆಯ ಗೃಹರಕ್ಷಕ ದಳದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹೊಸಪೇಟೆ ತಾಲೂಕ ಘಟಕದ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ.ರಾ.ಮ.ಸಾ.ಪ.ಜಿಲ್ಲಾ ಅಧ್ಯಕ್ಷರಾದ ಶ್ರೀ ವೆಂಕಟೇಶ್ ಬಡಿಗೇರ ಇವರು ವಹಿಸಿಕೊಂಡಿದ್ದರು. ಉದ್ಘಾಟಕರಾಗಿ ಆಗಮಿಸಿದ್ದ ಡಾ.ಎಸ್.ಶಿವಾನಂದ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತೃತ್ವದಲ್ಲಿ ಅರಳಿದ ಮಕ್ಕಳ ಸಾಹಿತ್ಯದ ಬಗ್ಗೆ ,ಮಕ್ಕಳ ಸಂಸ್ಕಾರ ,ಜ್ಞಾನದ ಬೆಳವಣಿಗೆ ಮತ್ತು ಸಂರಕ್ಷಣೆ ಯಲ್ಲಿ ಪಾಲಕರ ಪೋಷಕರ ಜವಾಬ್ದಾರಿಯ ಮಹತ್ವದ ಕುರಿತಾಗಿ ಮಾತನಾಡಿದರು. ವಿಶೇಷ ಉಪನ್ಯಾಸ ನೀಡಿದ ಡಾ.ಅಕ್ಕಿ ಬಸವೇಶ್ ರವರು "ಮಕ್ಕಳ ಸಾಹಿತ್ಯ ಬೆಳೆದು ಬಂದ ದಾರಿ" ಹಿನ್ನಲೆಯಲ್ಲಿ ಅತ್ಯುತ್ತಮವಾಗಿ ವಿಷಯ ಮಂಡಿಸಿದರು. ಇದೇ ವೇದಿಕೆಯಲ್ಲಿ ಹೊಸಪೇಟೆ ತಾಲೂಕಿನ ಭರತನಾಟ್ಯ,ಸಂಗೀತ,ಮಿಮಿಕ್ರಿ,ಚಿತ್ರಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈಯುತ್ತಿರುವ ಪ್ರತಿಭಾವಂತ ಮಕ್ಕಳಿಗೆ " 2023 ರ ವಿಜಯನಗರ ಚಿಣ್ಣರ ಸಾಧಕ ಪ್ರಶಸ್ತಿ" ಯನ್ನು ನೀಡಿ ಗೌರವಿಸಲಾಯಿತು.ಈ ಕಾರ್ಯಕ್ರಮದ ವೇದಿಕೆಯಲ್ಲಿ ಗೃಹ ರಕ್ಷಕ ದಳದ ಘಟಕಾಧಿಕಾರಿ ಶ್ರೀ ಎಸ್.ಎಮ್.ಗಿರೀಶ್, ಶ್ರೀ.ಡಾ.ದಯಾನಂದ ಕಿನ್ನಾಳ,ತಾ....