ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ.

ಶ್ರೀಮತಿ ಸವಿತಾ ಅಮರಶೇಟ್ಟಿ ಅಭಿಮಾನಿ ಬಳಗ ಧಾರವಾಡ, ಗ್ರಾಮೀಣ ಮತಕ್ಷೇತ್ರ ಇವರ ನೇತೃತ್ವದಲ್ಲಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ, ಧಾರವಾಡ. ಹಾಗೂ ಎಸ್.ಡಿ.ಎಮ್ ನಾರಾಯಣ ಹೃದಯಾಲಯ, ಧಾರವಾಡ, ಇವರ ಸಹಯೋಗದಲ್ಲಿ ತಜ್ಞವೈದ್ಯರಿಂದ “ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ” ವನ್ನು ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸರಕಾರಿ ಮಾದರಿಯ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ  ಆಯೋಜಿಸಲಾಯಿತು.  ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿದ ಶ್ರೀಮತಿ ಸವಿತಾ ಅಮರಶೇಟ್ಟಿ ಅವರು ಮಾತನಾಡಿ ಈಗಿನ ಕಾಲಘಟ್ಟದಲ್ಲಿ ಮನುಷ್ಯ ತಮ್ಮ ಒತ್ತಡ ಜೀವನ ಶೈಲಿಯಿಂದ ಅಧಿಕ ರಕ್ತದೊತ್ತಡ, ಮಧುಮೇಹ ಮಾನಸಿಕ ಒತ್ತಡ ಸೇರಿದಂತೆ ಹಲವಾರು ಕಾಯಿಲೆಗಳನ್ನು ಹೊಂದಿರುತ್ತಾರೆ. ಕಾಲಕಾಲಕ್ಕೆ ತಪಾಸಣೆ ಹಾಗೂ ವೈದ್ಯರ ಚಿಕಿತ್ಸೆಯಿಂದ ರೋಗಗಳನ್ನು ಪ್ರಾಥಮಿಕ ಹಂತದಲ್ಲಿಯೆ ಪತ್ತೆ ಹಚ್ಚಿ ಗುಣಪಡಿಸಬಹುದು ಎಂದರು. ನಮ್ಮ ಸುವರ್ಣ ಎಜ್ಯುಕೇಶನ್ ಟ್ರಸ್ಟ್ (ರಿ) ಸಾರ್ವಜನಿಕರ ಸೇವೆಗಾಗಿಯೇ ಹಲವಾರು ಕಾರ್ಯಕ್ರಮಗಳನ್ನು ಏರ್ಪಡಿಸುತ್ತಿದೆ. ಯಾರಿಗೆ ಅಗತ್ಯತೆ ಇರುತ್ತದೆಯೋ ಅಲ್ಲಿ ಸೇವೆ ಮಾಡುವ ಕೆಲಸ ನಮ್ಮ ಸುವರ್ಣ ಎಜುಕೇಶನ್ ಟ್ರಸ್ಟ್ ವತಿಯಿಂದ ನಡೆಯುತ್ತದೆ. ಮನುಷ್ಯನಿಗೆ ಆರೋಗ್ಯವೇ ಮುಖ್ಯ, ಅದನ್ನು ನಾವು ಕಾಪಾಡಿಕೊಳ್ಳಬೇಕು ಆದ್ದರಿಂದ ಈ ಶಿಬಿರದ ಉಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು, ಎಂದ ಅವರು ಹೆಬ್ಬಳ್ಳಿ ಗ್ರಾಮಂತರ ಭಾಗದ ಜನರು ಇದರ ಸದುಪಯೋಗ ಪಡೆಯಲೆಂದು ಈ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.
ಹೆಚ್ಚಿನ ಸಂಖ್ಯೆಯಲ್ಲಿ ಬಂದ ಸುತ್ತಮುತ್ತಲಿನ ಗ್ರಾಮಸ್ಥರು ಆರೋಗ್ಯ ಶಿಬಿರದಿಂದ ಪ್ರಯೋಜನ ಪಡೆದುಕೊಂಡರು. ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ ಕಣ್ಣಿನ ತಪಾಸಣೆ, ದಂತ ಪರೀಕ್ಷೆ, ಕಿವಿತಪಾಸಣೆ, ಗಂಟಲು ತಪಾಸಣೆ, ಮೂಗು ತಪಾಸಣೆ, ಚರ್ಮರೋಗ ತಪಾಸಣೆ, ಹೃದಯ ಸಂಬಂಧಿ ಕಾಯಿಲೆ ಇಸಿಜಿ, ಸ್ತನ ಪರೀಕ್ಷೆ ಗರ್ಭಕಂಠದ ಕ್ಯಾನ್ಸರ್ ನ ತಪಾಸಣೆ. ಆಪ್ತ ಸಮಾಲೋಚನೆ ಈ ಎಲ್ಲಾ ತಪಾಸಣೆಯನ್ನು ಹಮ್ಮಿಕೊಳ್ಳಲಾಯಿತು. 
ಈ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಚಿಕ್ಕ ಮಕ್ಕಳ ತಜ್ಞರಾದ ಡಾ. ವಿಕ್ರಂ ಗೌಡರ್, ಎಲುಬು ಮತ್ತು ಕೀಲು ತಜ್ಞರಾದ ಡಾ. ಶಿವಪ್ರಸಾದ್ ಭಟ್, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ವೈಶಾಲಿ ಹಾಗೂ ಹೃದಯ ರೋಗ ತಜ್ಞರು, ಎಸ್.ಡಿ.ಎಂ ನಾರಾಯಣ ಹಾರ್ಟ್ ಸೆಂಟರ್, ಧಾರವಾಡ ಇವರ ಸಿಬ್ಬಂದಿಗಳು ಹಾಗೂ ಎನ್.ಎಸ್.ಎಸ್ ಯೂತ್ ಐಕಾನ್ ಸಂಜಯಕುಮಾರ ಬಿರಾದಾರ, ಟ್ರಸ್ಟ್ ಸದಸ್ಯರಾದ ಪ್ರೀಯಾ ಅವರು ಮತ್ತು ಊರಿನ ಗಣ್ಯರು ಉಪಸ್ಥಿತರಿದ್ದರು. 




Comments

Popular posts from this blog

ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಕರ್ನಾಟಕ ಸಾಂಸ್ಕೃತಿಕ ವೈಭವ ಕಾರ್ಯಕ್ರಮ.

ತುಮಕೂರಿನಲ್ಲಿ ಕವಿಗೋಷ್ಠಿ ಹಾಗೂ ಪುಸ್ತಕ ಓದು ಸಂವಾದ ಕಾರ್ಯಕ್ರಮ.

ಕಾವ್ಯದೀವಿಗೆ ಕೃತಿ ಲೋಕಾರ್ಪಣೆ