ಆರ್ ಶಶಿಕಲಾ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ.
ತುಮಕೂರು : ಆರ್ ಶಶಿಕಲಾ ಅವರು ತುಮಕೂರು ವಿಶ್ವವಿದ್ಯಾನಿಲಯದ ಡಾ ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರಾದ ಪ್ರೊ. ನಿತ್ಯಾನಂದ ಬಿ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ "ಕನ್ನಡ ಸ್ತ್ರೀವಾದಿ ಸಾಂಸ್ಕೃತಿಕ ವಿಮರ್ಶೆಯ ಸ್ವರೂಪ" ಎಂಬ ಮಹಾಪ್ರಬಂಧಕ್ಕೆ ತುಮಕೂರು ವಿಶ್ವವಿದ್ಯಾನಿಲಯವು ಪಿ.ಹೆಚ್‌ಡಿ. ಪದವಿ ಪ್ರಧಾನ ಮಾಡಿದೆ.
ಆರ್ ಶಶಿಕಲಾ ಅವರು ಪ್ರಸ್ತುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ, ಚಿಂತಾಮಣಿ, ಚಿಕ್ಕಬಳ್ಳಾಪುರ ಜಿಲ್ಲೆ ಇಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Comments
Post a Comment