ಮಮತ ವಿ ಇವರಿಗೆ ಪಿಹೆಚ್.ಡಿ. ಪದವಿ ಪ್ರದಾನ.
ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ವಿರುಪಾಪುರ ಗ್ರಾಮದ ಮಮತ ವಿ ಅವರಿಗೆ ತುಮಕೂರು ವಿಶ್ವವಿದ್ಯಾನಿಲಯ ಪಿಹೆಚ್.ಡಿ. ಪದವಿ ಪ್ರದಾನ ಮಾಡಿದೆ.
ತುಮಕೂರು ವಿಶ್ವವಿದ್ಯಾನಿಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಕೇಶವ ಅವರ ಮಾರ್ಗದರ್ಶನದಲ್ಲಿ ಪೂರ್ಣಕಾಲಿಕ ಸಂಶೋಧನಾರ್ಥಿಯಾಗಿ ಸಂಶೋಧನೆ ಕೈಗೊಂಡು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗಕ್ಕೆ ಸಲ್ಲಿಸಿದ ‘ಮ್ಯಾಪಿಂಗ್ ಆಫ್ ಆಲ್ಝೈಮರ್ಸ್ ಡಿಸೀಸ್ ರಿಸರ್ಚ್ ಲಿಟರೇಚರ್ : ಎ ಸೈಂಟೋಮೆಟ್ರಿಕ್ ಸ್ಟಡಿ’ ಎಂಬ ಮಹಾಪ್ರಬಂಧಕ್ಕೆ ತುಮಕೂರು ವಿಶ್ವವಿದ್ಯಾನಿಲಯ ಪಿಹೆಚ್.ಡಿ. ಪದವಿ ನೀಡಿದೆ.
Comments
Post a Comment